ಪುಣೆ, ಡಿ.04 (DaijiworldNews/HR): ರಾಹುಲ್ ಗಾಂಧಿ ಅವರು ರಾಷ್ಟಮಟ್ಟದ ನಾಯಕರಾಗಿದ್ದು, ಅವರಲ್ಲಿ ಸ್ವಲ್ಪಮಟ್ಟಿಗೆ ಸ್ಥಿರತೆಯ ಕೊರತೆ ಕಾಣಿಸುತ್ತಿದೆ ಎಂದು ಕಾಂಗ್ರೆಸ್ ಮಿತ್ರಪಕ್ಷದ ನಾಯಕ ಶರದ್ ಪವಾರ್ ಹೇಳಿದ್ದಾರೆ.
ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, "ರಾಹುಲ್ ಗಾಂಧಿ ಅವರು ರಾಷ್ಟಮಟ್ಟದ ನಾಯಕರಾಗಿದ್ದು ಅವರಿಗೆ ಕೊಂಚ ಸ್ಥಿರತೆಯ ಕೊರತೆ ಇದೆ" ಎಂದರು.
ಇನ್ನು ಒಬಾಮಾ ತಮ್ಮ ಆತ್ಮಚರಿತ್ರೆಯಲ್ಲಿ ರಾಹುಲ್ ಶಿಕ್ಷಕನನ್ನು ಮೆಚ್ಚಿಸಲು ಉತ್ಸುಕನಾಗಿರುವ ವಿದ್ಯಾರ್ಥಿಯಂತೆ ಕಾಣಿಸುತ್ತಾರೆ. ಆದರೆ, ವಿಷಯವನ್ನು ಕರಗತ ಮಾಡಿಕೊಳ್ಳುವ ಉತ್ಸಾಹ ಅವರಲ್ಲಿಲ್ಲ, ಎಂದು ಬರೆದುಕೊಂಡಿದ್ದ ವಿಚಾರವಾಗಿ ಮಾತನಾಡಿದ ಅವರು, "ಎಲ್ಲರ ದೃಷ್ಟಿಕೋನವನ್ನು ಒಪ್ಪಲೇಬೇಕು ಎಂಬ ಅಗತ್ಯವೇನೂ ಇಲ್ಲ, ನಮ್ಮ ದೇಶದ ನಾಯಕತ್ವದ ಬಗ್ಗೆ ನಾನು ಏನು ಬೇಕಾದರೂ ಹೇಳುತ್ತೇನೆ, ಆದರೆ ಬೇರೆ ದೇಶದ ನಾಯಕತ್ವದ ಬಗ್ಗೆ ಮಾತನಾಡುವುದಿಲ್ಲ. ಪ್ರತಿಯೊಬ್ಬರೂ ಆ ಮಿತಿಯನ್ನು ಕಾಯ್ದುಕೊಳ್ಳಬೇಕು" ಎಂದು ಹೇಳಿದ್ದಾರೆ.
"ನಾನು ಸೋನಿಯಾ ಗಾಂಧಿ ಮತ್ತು ಅವರ ಕುಟುಂಬದೊಂದಿಗೆ ಭಿನ್ನಾಭಿಪ್ರಾಯಗಳನ್ನು ಇರಬಹುದು, ಆದರೆ ಕಾಂಗ್ರೆಸ್ಸಿಗರಿಗೆ ಗಾಂಧಿ-ನೆಹರೂ ಕುಟುಂಬದ ಬಗ್ಗೆ ಪ್ರೀತಿಯ ಭಾವನೆ ಇದೆ" ಎಂದು ಹೇಳಿದ್ದಾರೆ.