ಮುಂಬೈ, ಡಿ.04 (DaijiworldNews/PY): "ಹಣದುಬ್ಬರದ ಬಗ್ಗೆ ಕಳವಳ ವ್ಯಕ್ತಪಡಿಸಿ ಆರ್ಬಿಐ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ತೀರ್ಮಾನಿಸಿದ್ದು, ಶೇ.4ರಷ್ಟೆ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ" ಎಂದು ಶುಕ್ರವಾರ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದರು.
ಎಂಪಿಸಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ ಅವರು, "ಕೊರೊನಾದಿಂದಾಗಿ ಕುಸಿತ ಕಂಡಿರುವ ದೇಶದ ಆರ್ಥಿಕತೆಗೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ದರ ಕಡಿತ ಮಾಡಲು ಸಿದ್ಧ" ಎಂದರು.
ರೆಪೊ ದರದಲ್ಲಿ ಮೂರನೇ ಬಾರಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ ಆರ್ಬಿಐ ರೆಪೊ ದರದಲ್ಲಿ 115 ಅಂಶಗಳನ್ನು ಕಡಿತಗೊಳಿಸಿದಂತೆ ಆಗಿದೆ.