ಬೆಂಗಳೂರು, ಡಿ.04 (DaijiworldNews/PY): "ಡಿ.5ರಂದು ನಡೆಯಲಿರುವ ಕರ್ನಾಟಕ ಬಂದ್ಗೆ ಅವಕಾಶವಿಲ್ಲ. ಅಲ್ಲದೇ, ಕರ್ನಾಟಕ ಬಂದ್ ಮಾಡುವ ಅವಶ್ಯಕತೆ ಇಲ್ಲ" ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಮಾಡಬೇಡಿ. ಬಂದ್ ಮಾಡುವ ಅವಶ್ಯಕತೆ ಇಲ್ಲ. ಬಂದ್ ಹಿಂಪಡೆಯುವಂತೆ ಮನವಿ ಮಾಡಿದರು.
"ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕಾರ್ಯ ಮಾಡುತ್ತೇವೆ. ಬಂದ್ ಮಾಡಿದರೆ ಜನರ ದಿನನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ" ಎಂದರು.
"ಕೊರೊನಾದ ಎರಡನೇ ಅಲೆ ಹಿನ್ನೆಲೆ ರಾತ್ರಿ ಕರ್ಫ್ಯೂ ಜಾರಿ ವಿಚಾರದ ಬಗ್ಗೆ ಯಾವುದೇ ರೀತಿಯಾದ ಯೋಚನೆ ಇಲ್ಲ. ಇಂದು ಮಧ್ಯಾಹ್ನ ಬೆಳಗಾವಿಗೆ ತೆರಳಲಿದ್ದೇನೆ. ಬೆಳಗಾವಿಯಲ್ಲಿ ನಾಳೆ ಬಿಜೆಪಿಕಾರ್ಯಕಾರಿಣಿ ಇದೆ. ಇದೆಲ್ಲಾ ಮುಗಿದ ಬಳಿಕ ಸಂಜೆ ವಾಪಾಸ್ಸಾಗಲಿದ್ದು, ಉಳಿದ ವಿಷಯಗಳ ಬಗ್ಗೆ ತಿಳಿಸುತ್ತೇನೆ" ಎಂದು ಹೇಳಿದರು.