ಬೆಂಗಳೂರು,ಡಿ. 04 (DaijiworldNews/HR): ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿಗೆ ಜನವರಿವರೆಗೆ ಜೈಲಿನಲ್ಲೇ ಇರುವಂತಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ, ಜನವರಿ ಮೊದಲ ವಾರಕ್ಕೆ ಮುಂದೂಡಿದೆ ಎಂದು ತಿಳಿದು ಬಂದಿದೆ.
ರಾಗಿಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಆರ್ ಎಫ್ ನಾರಿಮನ್, ನವೀನ್ ಸಿನ್ಹಾ ಮತ್ತು ಕೆ ಎಂ ಜೋಸೆಫ್ ನೇತೃತ್ವದ ಪೀಠ ಈ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿದೆ.
ಸೆಪ್ಟೆಂಬರ್ 4ರಂದು ರಾಗಿಣಿಯನ್ನು ಸಿಸಿಬಿ ಪೊಲೀಸರು ಡ್ರಗ್ಸ್ ದಂಧೆ ಪ್ರಕರಣದಲ್ಲಿ ಬಂಧಿಸಿದ್ದು, ಅವರ ವಿರುದ್ಧ ಎನ್ಡಿಪಿಎಸ್ ಮತ್ತು ಐಪಿಸಿ ಕಾಯ್ದೆಗಳಡಿಯಲ್ಲಿ ಪ್ರಕರಣಗಳು ದಾಖಲಾಗಿತ್ತು.