ಬೆಂಗಳೂರು, ಡಿ.05 (DaijiworldNews/HR): ಕನ್ನಡಪರ ಸಂಘಟನೆಗಳು ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಇಂದು ಬಂದ್ಗೆ ಕರೆ ನೀಡಿದ್ದು, ಬೆಂಗಳೂರು ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಾಂಧರ್ಭಿಕ ಚಿತ್ರ
ಮಾರುಕಟ್ಟೆ ಸೇರಿದಂತೆ ಹೂವು, ಹಣ್ಣು, ತರಕಾರಿ ಮಾರುಕಟ್ಟೆಗಳಲ್ಲಿ ಎಂದಿನಂತೆ ವ್ಯಾಪಾರ-ವಹಿವಾಟು ನಡೆಯುತ್ತಿದ್ದು, ಸಾರ್ವಜನಿಕರು ಮಾರುಕಟ್ಟೆಯತ್ತ ಎಂದಿನಂತೆ ಬರುತ್ತಿದ್ದಾರೆ.
ಇನ್ನು ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳ ಕೆಲವು ಕಾರ್ಯಕರ್ತರು ಮಾತ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ಒದಗಿಸಿದ್ದಾರೆ.