ಮುಂಬೈ, ಡಿ.05 (DaijiworldNews/HR): ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿ ರಿಪಬ್ಲಿಕ್ ಸುದ್ದಿ ವಾಹಿನಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಮುಂಬೈ ಪೊಲೀಸರು ಸ್ಥಳೀಯ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದ್ದಾರೆಂದು ತಿಳಿದು ಬಂದಿದೆ.
2018ರ ಅನ್ವಯ್ ನಾಯ್ಕ್ ಮತ್ತು ಅವರ ತಾಯಿ ಕುಮುದ್ ಅವರ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಗಢ ಜಿಲ್ಲೆಯ ಅಲಿಬಾಗ್ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ.
ಇನ್ನು ಅರ್ನಬ್ ಗೋಸ್ವಾಮಿ ಅವರೊಂದಿಗೆ ಫಿರೋಝ್ ಶೇಖ್ ಮತ್ತು ನಿತೀಶ್ ಸಾರ್ಡಾ ವಿರುದ್ಧವೂ ಆರೋಪಪಟ್ಟಿ ಸಲ್ಲಿಕೆಯಾಗಿದೆ ಎಂದು ಸರಕಾರಿ ಅಭಿಯೋಜಕ ಪ್ರದೀಪ್ ಘರಾಟ್ ಹೇಳಿದ್ದಾರೆ.
ಅರ್ನಬ್ ಗೋಸ್ವಾಮಿಯವರು ಆರೋಪಟ್ಟಿ ಸಲ್ಲಿಕೆಗೆ ತಡೆ ನೀಡಬೇಕು ಎಂದು ಕೋರಿ ಮುಂಬೈ ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಬಾಕಿ ಇದೆ.