ಬೆಂಗಳೂರು, ಡಿ.05 (DaijiworldNews/HR): ಕನ್ನಡಪರ ಸಂಘಟನೆಗಳು ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಇಂದು ಬಂದ್ ನಡೆಸುತ್ತಿದ್ದು, ಈ ವೇಳೆ ಮಾಸ್ಕ್ ಧರಿಸದ ಮತ್ತು ಸಾಮಾಜಿಕ ಅಂತರ ಕಾಪಾಡದವರಿಗೆ ದಂಡ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿದೆ.
ಬಂದ್ ವೇಳೆ ಜನ ಸಂದಣಿ ಸೇರುತ್ತದೆ, ಹಾಗಾಗಿ ಈ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಆಗುವುದನ್ನು ತಡೆಯಲು ಪೊಲೀಸರು ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.
ಇನ್ನು ರಾಜಕೀಯ ರ್ಯಾಲಿಗಳಲ್ಲಿ ಭಾಗವಹಿಸಿ ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಕದಿರುವ ಮತ್ತು ಅವರನ್ನು ವಿಚಾರಣೆಗೆ ಒಳಪಡಿಸದ ಸರ್ಕಾರವನ್ನು ಪೀಠ ತರಾಟೆಗೆ ತೆಗೆದುಕೊಂಡಿದೆ.