ನವದೆಹಲಿ, ಡಿ.05 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ಖಂಡಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಈ ಕುರಿತು ರೈತರ ಜತೆ ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಸಚಿವರು ಮಾತುಕತೆ ನಡೆಸಲಿದ್ದಾರೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದೆ.
ಇನ್ನು ಬೇಡಿಕೆಗೆ ಕೇಂದ್ರ ಸರ್ಕಾರ ಸಹಕರಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸಿ ಡಿಸೆಂಬರ್ 8ಕ್ಕೆ ಭಾರತ ಬಂದ್ಗೆ ಕರೆ ನೀಡಲಾಗುವುದು ಎಂದೂ ರೈತರು ಎಚ್ಚರಿಕೆ ನೀಡಿದ್ದಾರೆ.
ಇಂದು ನಡೆಯುವ ಮಾತುಕತೆಯಿಂದಲೂ ಯಾವುದೇ ಪ್ರಯೋಜನವಾಗದಿದ್ದಲ್ಲಿ ರಾಜಸ್ಥಾನ ರೈತರೂ ದೆಹಲಿಗೆ ಜಾಥಾ ಹಮ್ಮಿಕೊಳ್ಳಲಿದ್ದು, ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕಿಸಾನ್ ಮಹಾಪಂಚಾಯತ್ನ ಅಧ್ಯಕ್ಷ ರಾಮ್ಪಾಲ್ ಜಾಟ್ ಹೇಳಿದ್ದಾರೆ.