ಬೆಂಗಳೂರು, ಡಿ.05 (DaijiworldNews/HR): ಮಾಜಿ ಸಚಿವ ರೋಷನ್ ಬೇಗ್ ಅವರು ಐಎಂಎ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು ಇಂದು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ರೋಷನ್ ಬೇಗ್ ಅವರು ಐಎಂಎ ಪ್ರಕರಣದ ಮುಖ್ಯ ಆರೋಪಿ ಮನ್ಸೂರ್ ಖಾನ್ ಅವರಿಂದ 200 ಕೋಟಿ ರೂಪಾಯಿ ಪಡೆದಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಬಂಧನಕೊಳಗಾಗಿದ್ದರು.
ಇನ್ನು ರೋಷನ್ ಬೇಗ್ ಅವರು ಜಾಮೀನು ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿದ್ದು, ಇಂದು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.