ಚಂಡೀಘಡ,ಡಿ.05 (DaijiworldNews/HR): ದೇಶದಲ್ಲಿಯೇ ಅಭಿವೃದ್ಧಿ ಪಡಿಸಿದ್ದ ಕೋವ್ಯಾಕ್ಸಿನ್ ಪ್ರಯೋಗಕ್ಕಾಗಿ ಒಳಗಾಗಿದ್ದ ಹರ್ಯಾಣದ ಸಚಿವ ಅನಿಲ್ ವಿಜ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಸ್ವತಃ ಟ್ವೀಟ್ ಮಾಡಿರುವ ಅವರು," ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕಳೆದ 10 ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಮುಂಜಾಗ್ರತಾ ಕ್ರಮವಾಗಿ ಕೊರೊನಾ ಪರೀಕ್ಷೆಗೊಳಪಡಬೇಕು" ಎಂದು ಮನವಿ ಮಾಡಿಕೊಂಡಿದ್ದಾರೆ.
ನವೆಂಬರ್ 20ರಂದು ಸಚಿವ ಅನಿಲ್ ವಿಜ್ ಅವರು ಮೊದಲ ಹಂತದ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗಕ್ಕೆ ಒಳಗಾಗುವುದಾಗಿ ತಿಳಿಸಿ ಸ್ವತಃ ಸಚಿವ ವಿಜ್ ಲಸಿಕೆ ಪ್ರಯೋಗಕ್ಕೆ ಒಳಗಾಗಿದ್ದರು.