ಜಮ್ಮು, ಡಿ.05 (DaijiworldNews/HR): ಅಂತರರಾಷ್ಟ್ರೀಯ ಗಡಿ ಬಳಿಯ ಮುಂಚೂಣಿ ಠಾಣೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆಯು ಗುಂಡಿನ ದಾಳಿ ನಡೆಸಿದ್ದು, ಅದಕ್ಕೆ ಬಿಎಸ್ಎಫ್ ಪ್ರತಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಠುವಾ ಜಿಲ್ಲೆಯ ಹೀರಾನಗರ ಸೆಕ್ಟರ್ ವ್ಯಾಪ್ತಿಯ ಪನ್ಸಾರ್ ಬಳಿ ಪಾಕಿಸ್ತಾನ ಸೇನೆಯು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಗಡಿ ಭದ್ರತಾ ಪಡೆ(ಬಿಎಸ್ಎಫ್) ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಎಂದು ತಿಳಿಸಿದ್ದಾರೆ.
ಇನ್ನು ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳ ಪಡೆಗಳ ನಡುವೆ ಶನಿವಾರ ಬೆಳಿಗ್ಗೆ 3.35 ತನಕ ಗುಂಡಿನ ಚಕಮಕಿ ನಡೆದಿದ್ದು, ನಮ್ಮ ಕಡೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.