ನವದೆಹಲಿ,ಡಿ.05 (DaijiworldNews/HR): ಪ್ರಧಾನಿ ನರೇಂದ್ರ ಮೋದಿಯವರು ಡಿಸೆಂಬರ್ 10 ನವದೆಹಲಿಯಲ್ಲಿ ಹೊಸ ಸಂಸತ್ ಭವನದ ಶಂಕುಸ್ಥಾಪನೆ ಮತ್ತು ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.
ನೂತನ ಸಂಸತ್ತಿನ ಕಟ್ಟಡ ನಿರ್ಮಾಣ ಕಾಮಗಾರಿಯು ಡಿಸೆಂಬರ್ನಲ್ಲಿ ಆರಂಭವಾಗಲಿದ್ದು, 2022 ಅಕ್ಟೋಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಈ ಕಟ್ಟಡವು ಸರಿ ಸುಮಾರು 60,000 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ಪ್ರಸ್ತುತ ಸ್ವಾಗತ, ತಡೆ ಗೋಡೆ ಹಾಗೂ ಇತರ ತಾತ್ಕಾಲಿಕ ರಚನೆಗಳನ್ನು ಹೊಂದಿರುವ ಪಾರ್ಲಿಮೆಂಟ್ ಹೌಸ್ ಎಸ್ಟೇಟ್ ಪ್ಲಾಟ್ ಸಂಖ್ಯೆ 118ರಲ್ಲಿ ನೆಲೆಗೊಳ್ಳಲಿದೆ.
ಇನ್ನು ಈ ಹೊಸ ಸಂಸತ್ ಭವನದ ಲೋಕಸಭೆಯಲ್ಲಿ 888 ಸದಸ್ಯರಿಗೆ ಆಸನ ಹಾಗೂ ರಾಜ್ಯಸಭೆಯ ಮೇಲ್ಮನೆ ಸದಸ್ಯರಿಗೆ 384 ಆಸನ ಸಾಮರ್ಥ್ಯವನ್ನು ಹೊಂದಿರುತ್ತದೆ ಎಂದು ತಿಳಿದು ಬಂದಿದೆ.