ನವದೆಹಲಿ, ಡಿ.05 (DaijiworldNews/MB) : ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಕಳೆದ ಹತ್ತು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮೂರು ಕಾನೂನುಗಳು ರೈತ ವಿರೋಧಿಯಾಗಿದ್ದು ಇದನ್ನು ಹಿಂಪಡೆಯಬೇಕು ಎಂದು ರೈತರು ಬೇಡಿಕೆಯಿಟ್ಟಿದ್ದಾರೆ. ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ರೈತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಕೇಂದ್ರ ಭರವಸೆ ನೀಡಿದೆ.
ಶನಿವಾರ ದೆಹಲಿಯ ವಿಜ್ಞಾನ ಭವನದಲ್ಲಿ ಪ್ರತಿಭಟನಾನಿರತ ರೈತ ಪ್ರತಿನಿಧಿಗಳೊಂದಿಗೆ ಐದನೇ ಸುತ್ತಿನ ಮಾತುಕತೆ ನಡೆಯಿತು.
ಈ ಸಂದರ್ಭ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ಸರ್ಕಾರ ಸೌಹಾರ್ದಯುತ ಮಾತುಕತೆಗೆ ಬದ್ದ. ಈ ಕಾನೂನುಗಳ ಎಲ್ಲಾ ಸಕಾರಾತ್ಮಕ ಸಲಹೆಯನ್ನು ನಾವು ಸ್ವಾಗತಿಸುತ್ತೇವೆ'' ಎಂದು ತಿಳಿಸಿದ್ದಾರೆಂದು ವರದಿಯಾಗಿದೆ.