ಬೆಂಗಳೂರು, ಡಿ. 06 (DaijiworldNews/HR): ಇದೀಗ ಚುನಾವಣೆಗೆ ಪೋಷಿಸಿರುವ ಗ್ರಾಮ ಪಂಚಾಯತ್ಗಳ ಪೈಕಿ ಕೆಲವು ಗ್ರಾಮ ಪಂಚಾಯತ್ಗಳನ್ನು ನಗರ ಸ್ಥಳೀಯ ಸಂಸ್ಥೆಗಳನ್ನಾಗಿ ಪರಿವರ್ತಿಸುವ ಉದ್ದೇಶದಿಂದ 27 ಗ್ರಾಮ ಪಂಚಾಯತ್ಗಳನ್ನು ಚುನಾವಣೆಯಿಂದ ಕೈ ಬಿಡಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ.
ಈ ನಿಟ್ಟಿನಲ್ಲಿ ರಾಜ್ಯದ 5762 ಗ್ರಾಮ ಪಂಚಾಯತ್ಗಳ ಪೈಕಿ 5735 ಗ್ರಾಮ ಪಂಚಾಯತ್ಗಳಿಗೆ ಮಾತ್ರ ಚುನಾವಣೆ ನಡೆಯಲಿದೆ.
ಇನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮ ಪಂಚಾಯತ್ಗೆ ಸೇನಾಪುರ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ಪ್ರಶ್ನಿಸಿ ಮೈಸೂರಿನ ಪ್ರಾದೇಶಿಕ ಆಯುಕ್ತರ ಬಳಿ ಮೇಲ್ಮನವಿ ಸಲ್ಲಿಸಲಾಗಿದ್ದು, ಇದರ ವಿಚಾರಣೆ ಹಂತದಲ್ಲಿರುವುದರಿಂದ ಹೊಸಾಡು ಗ್ರಾಮ ಪಂಚಾಯತ್ ಅನ್ನು ಚುನಾವಣೆಯಿಂದ ಕೈ ಬಿಡಲಾಗಿದೆ.
ಚುನಾವಣೆಯಿಂದ ಕೈ ಬಿಡಲಾಗುತ್ತಿರುವ ಗ್ರಾ.ಪಂಚಾಯತಿಗಳ ಹೆಸರು:
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಿನ್ನಿಗೋಳಿ, ಮನ್ನಬೆಟ್ಟು, ಕಟೀಲು(ಕೊಂಡೆಮೂಲ), ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮ ಪಂಚಾಯತ್, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ(ಗುಳದಕೇರಿ), ಮಂಕಿ-ಎ(ಹಳೆಮರ), ಮಂಕಿ-ಬಿ(ಅನಂತವಾಡಿ), ಮಂಕಿ-ಸಿ(ಚಿತ್ತಾರ), ಚಿಕ್ಕಬಾಣಾವರ, ಯಲಹಂಕ ತಾಲೂಕಿನ ಹುಣಸಮಾರನಹಳ್ಳಿ, ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ತಾಲೂಕಿನ ಸೋಮಶಟ್ಟಿಹಳ್ಳಿ, ಪೀರನವಾಡಿ ಗ್ರಾಮ ಪಂಚಾಯತ್, ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಯರಗಟ್ಟಿ, ಅಥಣಿ ತಾಲೂಕಿನ ಕಾಗವಾಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ, ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ, ಸೊಣ್ಣಪ್ಪನಹಳ್ಳಿ, ಬೆಳಗಾವಿ ತಾಲೂಕಿನ ಮಚ್ಚೆ, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಎಚ್.ಕಡದಕಟ್ಟೆ, ಹರಿಹರ ತಾಲೂಕಿನ ಗುತ್ತೂರು, ಕೋಲಾರ ಜಿಲ್ಲೆಯ ಕೋಲಾರ ತಾಲೂಕಿನ ವೇಮಗಲ್, ಕುರುಗಲ್, ಶೆಟ್ಟಿಹಳ್ಳಿ, ಚೌಡದೇವನಹಳ್ಳಿ, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ, ಚಿಂಚೋಡಿ, ಕರಡಿಗುಡ್ಡ.