ಚಿತ್ರದುರ್ಗ, ಡಿ.06 (DaijiworldNews/MB) : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಒಂದು ರಸ್ತೆ ಬದಿಗೆ ಪಲ್ಟಿಯಾಗಿ ಇಬ್ಬರು ಮೃತಪಟ್ಟು, ಐವರು ಗಾಯಗೊಂಡ ಘಟನೆ ಹಿರಿಯೂರು ನಗರದ ಚಳ್ಳಕೆರೆ ರಸ್ತೆಯಲ್ಲಿ ರವಿವಾರ ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದೆ.
ಈಶಾನ್ಯ ಸಾರಿಗೆ ನಿಗಮದ ಯಾದಗಿರಿ ವಿಭಾಗದ ಈ ಬಸ್ ಶಹಾಪುರದಿಂದ ಬೆಂಗಳೂರು ಕಡೆ ಸಂಚಾರ ಮಾಡುತ್ತಿದ್ದ ವೇಳೆ ಹಿರಿಯೂರು ನಗರದ ಚಳ್ಳಕೆರೆ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ವರದಿಯಾಗಿದೆ.
ಈ ಬಸ್ನಲ್ಲಿ ಸುಮಾರು 50ರಷ್ಟು ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದ್ದು ಈ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಐವರಯ ಗಾಯಗೊಂಡಿದ್ದಾರೆ, ಈ ಪೈಕಿ ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಪ್ರಸ್ತುತ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.