ಮುಂಬೈ,ಡಿ. 06 (DaijiworldNews/HR): ಸಿಲಿಂಡರ್ ಸ್ಫೋಟಗೊಂಡು 20 ಜನರು ಗಾಯಗೊಂಡ ಘಟನೆ ಮುಂಬೈನ ಲಾಲ್ಬಾಗ್ ಪ್ರದೇಶದಲ್ಲಿ ಇಂದು ನಡೆದಿದೆ.
ಸಾಂಧರ್ಭಿಕ ಚಿತ್ರ
ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಕಾರ್ಯಚರಣೆ ಮುಂದುವರೆಸುತ್ತಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಕಿಂಗ್ ಎಡ್ವರ್ಡ್ ಮೆಮೋರಿಯಲ್ (ಕೆಇಎಂ) ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಸ್ಥಿತಿ ವಿಚಾರಿಸಿದ್ದಾರೆಂದು ತಿಳಿದು ಬಂದಿದೆ.