ಮೈಸೂರು, ಡಿ. 06 (DaijiworldNews/HR): ನನ್ನನ್ನು ದಯವಿಟ್ಟು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಎಳೆಯಬೇಡಿ, ನಾನು ಮುಗ್ದ ಈಗಷ್ಟೇ ರಾಜಕೀಯದಲ್ಲಿ ಅಂಬೆಗಾಲಿಡುತ್ತಿದ್ದೇನೆ ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಈ ಕುರಿತು ಯಡಿಯೂರಪ್ಪ ಅವರು ರಾತ್ರೋರಾತ್ರಿ ಕಾಂಗ್ರೆಸ್ ಪ್ರಮುಖರನ್ನು ಭೇಟಿಯಾದ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ರಾಜಕೀಯ ಕ್ಷೇತ್ರದಲ್ಲಿ ನಾನು ಇನ್ನು ತುಂಬಾ ಬೆಳೆಯಬೇಕು, ಈಗಷ್ಟೆ ಅಂಬೆಗಾಲಿಡುತ್ತಿದ್ದೇನೆ, ರಾಜಕೀಯ ವಿಚಾರಗಳಿಗೆ ನನ್ನನ್ನು ಎಳೆಯಬೇಡಿ" ಎಂದರು.
ಇನ್ನು ಎಚ್ಡಿಕೆ ಮತ್ತು ಸಿದ್ದರಾಮಯ್ಯ ಅವರ ಆರೋಪ ಪ್ರತ್ಯಾರೋಪ ಕುರಿತು ಪ್ರತಿಕ್ರಿಯಿಸಿದ ಅವರು, "ಆ ಇಬ್ಬರು ನಾಯಕರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದರು. ರಾಜಕೀಯದಲ್ಲಿ ಎಲ್ಲವನ್ನೂ ಅನುಭವಿಸಿದ್ದಾರೆ. ಈಗ ಅವರ ಮೇಲೆ ಇವರು, ಇವರ ಮೇಲೆ ಅವರು ಆರೋಪ ಮಾಡುತ್ತಿದ್ದು, ಅದು ಅಷ್ಟಕ್ಕೇ ಸೀಮಿತವಾಗಿದೆ. ಈ ಕುರಿತು ನಾನೇತು ಮಾತನಾಡುವುದಿಲ್ಲ" ಎಂದು ಹೇಳಿದ್ದಾರೆ.