ಬೆಂಗಳೂರು, ಡಿ.06 (DaijiworldNews/MB) : ''ಡಾ. ಬಿ. ಆರ್. ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಯಾಗಿದ್ದು ಅವರ ಆದರ್ಶವನ್ನು ನಾವು ಅರ್ಥೈಸಿಕೊಂಡು ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ನಾವು ಶ್ರಮವಹಿಸೋಣ'' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
CM of Karnataka twitter Photo
ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
''ನಾವು ಅವರ ತತ್ವಗಳನ್ನು ಅರಿತು ಅವರು ತೋರಿಸಿದ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕು'' ಎಂದು ಕರೆ ನೀಡಿದ ಅವರು, ''ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ದೊರೆಯಬೇಕು. ಆ ನಿಟ್ಟಿನಲ್ಲಿ ಅಗತ್ಯವಾದ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಲ್ಲಿದ್ದೇವೆ'' ಎಂದರು.