ಮಧ್ಯಪ್ರದೇಶ, ಡಿ. 06 (DaijiworldNews/HR): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ 1 ರಿಂದ 8ನೇ ತರಗತಿಯವರೆಗಿನ ಶಾಲೆಗಳನ್ನು 2021ರ ಮಾರ್ಚ್ 31 ರವರೆಗೂ ತೆರೆಯುವುದಿಲ್ಲ ಎಂದು ಹೇಳಿದ್ದಾರೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಮಾಹಿತಿ ನೀಡಿರುವ ಅವರು, "1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಪರೀಕ್ಷೆಗಳು ನಡೆಯುವುದಿಲ್ಲ, ಪ್ರೊಜೆಕ್ಟ್ ವರ್ಕ್ ಗಳ ಆಧಾರದ ಮೇಲೆ ಮೌಲ್ಯಮಾಪನ ನಡೆಸಲಾಗುತ್ತದೆ" ಎಂದು ತಿಳಿಸಿದ್ದಾರೆ.
ಇನ್ನು "ವಾರ್ಷಿಕ ಪರೀಕ್ಷೆಯ ಹಿನ್ನಲೆಯಲ್ಲಿ 10 ಮತ್ತು 12ನೇಯ ತರಗತಿಗಳನ್ನು ಆರಂಭಿಸಲಾಗುವುದು. ಕೊರೊನಾ ಮಾರ್ಗಸೂಚಿಗಳನ್ನು ಮತ್ತು ಸಾಮಾಜಿಕ ಅಂತರಗಳನ್ನು ಕಡ್ಡಾಯವಾಗಿ ಪಾಲಿಸಬೇಕು. 9 ಮತ್ತು 11ನೇ ತರಗತಿಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಮ್ಮೆ ಅಥವಾ 2 ಬಾರಿಗೆ ತರಗತಿಗೆ ಹಾಜರಾಗುವಂತೆ ಆದೇಶ ಹೊರಡಿಸಲಾಗಿದೆ" ಎಂದು ಹೇಳಿದ್ದಾರೆ.