ಬೆಂಗಳೂರು, ಡಿ. 06 (DaijiworldNews/SM): ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 7ರ ಸೋಮವಾರದಂದು ಆರಂಭಗೊಳ್ಳಲಿದ್ದು, ಮುಂದಿನ ಒಂದುವಾರಗಳ ಕಾಲ ನಡೆಯಲಿದೆ.
ಚಳಿಗಾಲದ ಅಧಿವೇಶನದ ಮೊದಲ ದಿನವೇ ಸಿಎಂ ಗೈರಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ನಾಳೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಈ ಹಿನ್ನೆಲೆ ಅಧಿವೇಶನಕ್ಕೆ ಹಾಜರಾಗುವುದು ಅನುಮಾನ ಎನ್ನಲಾಗುತ್ತಿದೆ.
ಸೋಮವಾರ ಬೆಳಿಗ್ಗೆ ಸಿಎಂ ಬಿಎಸ್ ವೈ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 3.45ಕ್ಕೆ ಬೆಂಗಳೂರಿಗೆ ಮರಳಲಿದ್ದಾರೆ. ಇದರಿಂದಾಗಿ ಅಧಿವೇಶನಕ್ಕೆ ಗೈರಾಗುವ ಲಕ್ಷಣಗಳು ಗೋಚರಿಸುತ್ತಿವೆ. ಆದರೆ, ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಸಿಎಂ ನೀಡಿಲ್ಲ.
ಇನ್ನು ಸದನದಲ್ಲಿ ಆಡಳಿತರೂಢ ಬಿಜೆಪಿ ಪಕ್ಷದ ವೈಫಲ್ಯಗಳನ್ನು ಎತ್ತಿ ಹಿಡಿಯಲು ವಿಪಕ್ಷ ನಾಯಕ ಸಿದ್ದರಾಮಯ್ಯ ತಯಾರಾಗಿದ್ದು, ಪ್ರತಿಪಕ್ಷಗಳು ಸರಕಾರದ ವಿರುದ್ಧ ವಾಗ್ದಾಳಿಗೆ ರೆಡಿಯಾಗಿವೆ. ನಾಳೆಯಿಂದ ಆರಂಭಗೊಳ್ಳಲಿರುವ ಅಧಿವೇಶನದಲ್ಲಿ ಪ್ರಮುಖ ವಿಚಾರಗಳು ಚರ್ಚೆಗೆ ಬರಲಿವೆ ಎನ್ನಲಾಗಿದೆ.