ಬೆಂಗಳೂರು, ಡಿ.07 (DaijiworldNews/MB) : ತಮ್ಮ ಹೊಸ ಪಕ್ಷವನ್ನು ಆರಂಭ ಮಾಡುವುದಕ್ಕೂ ಮುನ್ನ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ರವಿವಾರ ಬೆಂಗಳೂರಿನಲ್ಲಿರುವ ತನ್ನ ಅಣ್ಣ ಸತ್ಯನಾರಾಯಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈ ಹಿಂದೆ ಈ ಬಗ್ಗೆ ಟ್ವೀಟ್ ಮಾಡಿದ್ದ ರಜನಿಕಾಂತ್ ಅವರು, "ಮುಂಬರುವ ವಿಧಾನಸಭಾ ಚುನಾವಣೆ ಸಂಧರ್ಭ ತಮ್ಮ ಪಕ್ಷವು ಖಂಡಿತವಾಗಿಯೂ ಪಾದಾರ್ಪಣೆಗೊಳ್ಳಲಿದೆ. ಪಕ್ಷದ ಸ್ಥಾಪನೆ ಸಂಬಂಧಿಸಿದ ವಿಷಯಗಳ ಬಗ್ಗೆ ಡಿಸೆಂಬರ್ 31 ರಂದು ಪ್ರಕಟಿಸಲಾಗುವುದು" ಎಂದು ತಿಳಿಸಿದ್ದರು.
2021ರಲ್ಲಿ ನಡೆಯಲಿರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸಿ, ಜನರ ಭಾರಿ ಬೆಂಬಲದೊಂದಿಗೆ ಗೆಲುವನ್ನು ಸಾಧಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದರು.