ಹೈದರಾಬಾದ್,ಡಿ. 07 (DaijiworldNews/HR) : ತೆಲುಗು ನಟಿ ವಿಜಯಶಾಂತಿ ಕಾಂಗ್ರೆಸ್ ಪಕ್ಷ ತೊರೆದು ಸೋಮವಾರ ಮತ್ತೆ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ನಟಿ ವಿಜಯಶಾಂತಿ ಅವರು 1997ರಲ್ಲಿ ಭಾರತೀಯ ಜನತಾ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದು, ಬಳಿಕ ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ಹೋರಾಡುವ ನಿಟ್ಟಿನಲ್ಲಿ ಟಿಆರ್ಎಸ್ ಪಕ್ಷ ಸೇರ್ಪಡೆಗೊಂಡು 2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು.
ಇನ್ನು2014ರಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ವಿಜಯಶಾಂತಿ ಆಂಧ್ರಪ್ರದೇಶ, ತೆಲಂಗಾಣ ಪ್ರತ್ಯೇಕವಾಗುವ ಸಂದರ್ಭದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದೀಗ ಮತ್ತೆ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದಾರೆ.