ಧಾರವಾಡ, ಡಿ. 07 (DaijiworldNews/HR): ಜಿ.ಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.
ವೀಡಿಯೋ ಕಾನ್ಪರೆನ್ಸ್ ಮೂಲಕ ಸೋಮವಾರ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿದ ಬಳಿಕ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನು ನ್ಯಾಯಾಧೀಶರಾದ ಗಂಗಾಧರ ಸಿ.ಎಂ ಅವರು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಡಿ.21ರ ವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.