ಕೋಲ್ಕತಾ, ಡಿ. 07 (DaijiworldNews/HR): ಪಶ್ಚಿಮಬಂಗಾಳದಲ್ಲಿ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ ಘಟನೆಯಲ್ಲಿ ಪಕ್ಷದ ಕಾರ್ಯಕರ್ತ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಪೊಲೀಸರ ಲಾಠಿಚಾರ್ಜ್ ನಿಂದ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಯನ್ನು ಖಂಡಿಸಿ ರಾಜ್ಯ ಬಿಜೆಪಿ ಉತ್ತರ ಪಶ್ಚಿಮಬಂಗಾಳದಲ್ಲಿ 12ಗಂಟೆ ಬಂದ್ ಗೆ ಕರೆ ನೀಡಿತ್ತು ಎಂದು ತಿಳಿದು ಬಂದಿದೆ.
ಇನ್ನುಉತ್ತರ ಬಂಗಾಳದ ಸಿಲಿಗುರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಆಡಳಿತಾರೂಢ ಟಿಎಂಸಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಉತ್ತರ್ ಕನ್ಯಾ ಸೆಕ್ರಟರಿಯೇಟ್ ನತ್ತ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದಾಗಿ ವರದಿಯಾಗಿದೆ.