ಬೆಂಗಳೂರು, ಡಿ.08 (DaijiworldNews/MB) : ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಸಮ್ಮತಿ ನೀಡಿದೆ.
ತನಗೆ ಆರೋಗ್ಯ ಸಮಸ್ಯೆ ಇರುವ ಹಿನ್ನೆಲೆ ಜಾಮೀನು ನೀಡಬೇಕೆಂದು ನಟಿ ಸಂಜನಾ ಅರ್ಜಿ ಸಲ್ಲಿಸಿದ್ದು ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ನ ಏಕ ಸದಸ್ಯ ನ್ಯಾಯಾಪೀಠ ಆರೋಗ್ಯ ತಪಾಸಣೆದೆ ಅನುಮತಿಸಿದೆ.
ನಗರದ ವಾಣಿವಿಲಾಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ, ಡಿಸೆಂಬರ್ 10ರೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಹಾಗೆಯೇ ಈ ಸಂದರ್ಭ ಮಾಧ್ಯಮಗಳ ಚಿತ್ರೀಕರಣಕ್ಕೆ ಅವಕಾಶ ನೀಡದಂತೆ ನ್ಯಾಯಪೀಠ ಸೂಚಿಸಿದೆ.