ನವದೆಹಲಿ, ಡಿ.08 (DaijiworldNews/MB) : ರೈತರನ್ನು ಭೇಟಿಯಾದ ನಂತರದಿಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ (ಆಪ್) ಆರೋಪಿಸಿದೆ.
ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಆಪ್, ''ಬಿಜೆಪಿಯ ದೆಹಲಿ ಪೊಲೀಸರು ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಸಿಂಗು ಗಡಿಯಲ್ಲಿ ರೈತರನ್ನು ಭೇಟಿ ಮಾಡಿದಾಗಿನಿಂದ ಅವರನ್ನು ಗೃಹಬಂಧನದಲ್ಲಿ ಇರಿಸಿದ್ದಾರೆ. ಅವರ ನಿವಾಸದಿಂದ ಹೊರಬರಲು ಹಾಗೂ ನಿವಾಸಕ್ಕೆ ತೆರಳಲು ಯಾರಿಗೂ ಅನುಮತಿ ನೀಡುತ್ತಿಲ್ಲ'' ಎಂದು ತಿಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಸಿಂಗು ಗಡಿಯಲ್ಲಿ ರೈತರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿದ್ದರು. ಹಾಗೆಯೇ ನಮ್ಮ ಪಕ್ಷದ ಕಾರ್ಯರ್ಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ತಿಳಿಸಿದ್ದರು.