ನವದೆಹಲಿ, ಡಿ.08 (DaijiworldNews/MB) : ''ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ವಿರೋಧಿಸುವುದೇ ಪ್ರತಿಪಕ್ಷಗಳ ಕೆಲಸವಾಗಿ ಬಿಟ್ಟಿದೆ'' ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ.
''ಮೋದಿ ಹಾಗೂ ಬಿಜೆಪಿಯನ್ನು ವಿರೋಧಿಸುವುದೇ ಪ್ರತಿಪಕ್ಷಗಳ ಕೆಲಸವಾಗಿದ್ದು ಇದೇ ಕಾರಣಕ್ಕೆ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿವೆ'' ಎಂದರು.
''ಕೃಷಿ ಕ್ಷೇತ್ರದಲ್ಲಿ ಸುಧಾರಣೆ ಆಗಬೇಕೆಂದು ಕಾಂಗ್ರೆಸ್ ಮತ್ತು ಇತರೆ ಪ್ರತಿಪಕ್ಷಗಳು ಬಯಸಿದ್ದವು. ಆದರೆ ಈಗ ವಿರೋಧಿಸಬೇಕು ಎಂದೇ ವಿರೋಧ ಮಾಡುತ್ತಿದೆ. ಪ್ರತಿಪಕ್ಷಗಳಿಗೆ ಸರಿಯಾದ ನಿಲುವು ಇಲ್ಲ'' ಎಂದು ಟೀಕಿಸದ್ದಾರೆ.
''ಡಾ. ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಏನು ಮಾಡಿತ್ತೋ ಅದನ್ನೇ ನಾವು ಮಾಡಲು ಮುಂದಾಗಿದ್ದೇವೆ. ಮತ್ತೇಕೆ ಈ ದ್ವಂದ್ವ ನಿಲುವು'' ಎಂದು ವಿಪಕ್ಷಗಳನ್ನು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಂಗಳವಾರ ನಡೆಯುತ್ತಿರುವ ಭಾರತ್ ಬಂದ್ಗೆ ಬಿಜೆಪಿ ಹೊರತುಪಡಿಸಿ 21 ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.