ಬೆಂಗಳೂರು,ಡಿ.08 (DaijiworldNews/HR): ಕೃಷಿ ಮಸೂದೆಯನ್ನು ವಿರೋಧಿಸಿ ಇಂದು ದೇಶದಾದ್ಯಂತ ರೈತ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದು, ಕರ್ನಾಟಕದಲ್ಲಿ ಯಾವುದೇ ಭಾಗದಲ್ಲೂ ಜನ ಬಂದ್ಗೆ ಸಹಕಾರ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅನಗತ್ಯವಾಗಿ ಬಂದ್ ಕರೆ ಕೊಡುವ ಬದಲಾಗಿದೆ, ವಾಸ್ತವ ಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರ ಮತ್ತು ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಪರವಾಗಿದೆ. ರೈತರಿಗೆ ಧಕ್ಕೆ ತರುವಂಥ ಕೆಲಸವನ್ನು ಎಂದೂ ಈ ದೇಶದ ಪ್ರಧಾನಿ ಮಾಡುವುದಿಲ್ಲ" ಎಂದರು.
ಇನ್ನು ಯಾವುದೊ ರಾಜಕೀಯ ಕಾರಣಕ್ಕಾಗಿ ಈ ರೀತಿ ಬಂದ್ ಕರೆ ನೀಡುವುದು ಸರಿಯಲ್ಲ, ಅದಕ್ಕಾಗಿ ಕರ್ನಾಟಕದಲ್ಲಿ ಜನ ಸಹಕಾರ ನೀಡುವುದಿಲ್ಲ. ರಾಜ್ಯದ ಇತರ ಭಾಗದಲ್ಲಿರುವ ಜನ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ. ನಿರಂತರವಾಗಿ ಜನಜೀವನ ಸುಸೂತ್ರವಾಗಿ ನಡೆಯಬೇಕು. ಯಾರಾದರೂ ಅಡ್ಡಿ ಉಂಟು ಮಾಡಿದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ" ಎಂದು ಹೇಳಿದ್ದಾರೆ.