ಬೆಂಗಳೂರು, ಡಿ.08 (DaijiworldNews/MB) : ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಮಂಗಳವಾರ ಬಂದ್ ನಡೆಸುತ್ತಿದ್ದಾರೆ. ಹಾಗೆಯೇ ಕಳೆದ 12 ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಈ ಹೋರಾಟಕ್ಕೆ ನಟ ಶಿವರಾಜ್ ಕುಮಾರ್ ಅವರು ಕೂಡಾ ಬೆಂಬಲ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ರೈತ ದೇಶದ ಬೆನ್ನೆಲುಬು , ರೈತ ಇದ್ರೇನೆ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ'' ಎಂದು ಹೇಳಿದ್ದಾರೆ.
ಕಳೆದ 12 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು ಮಂಗಳವಾರ ಭಾರತ್ ಬಂದ್ಗೆ ಕರೆ ನೀಡಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ 5 ಸುತ್ತಿನ ಮಾತುಕತೆ ನಡೆದಿದ್ದು ಬುಧವಾರ ಆರನೇ ಸುತ್ತಿನ ಮಾತುಕತೆ ನಡೆಯಲಿದೆ. ಐದನೇ ಸುತ್ತಿನ ಮಾತುಕತೆಯ ವೇಳೆ ಕೇಂದ್ರ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ರೈತರು ಸಬೆಯಲ್ಲೇ ಮೌನ ಪ್ರತಿಭಟನೆ ನಡೆಸಿದ್ದರು. ಹಾಗೆಯೇ ಈ ಕಾಯ್ದೆಯನ್ನು ರದ್ದು ಮಾಡುವಂತೆ ಒತ್ತಾಯಿಸಿದ್ದರು.