ಬೆಂಗಳೂರು, ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿ ಹೆಚ್ಚಾಗುತ್ತಿದ್ದು, ಇದನ್ನು ನಿರ್ಣಾಮ ಮಾಡಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಕೂಡ ಸರಕಾರದ ಜೊತೆ ಕೈಜೋಡಿಸಬೇಕಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಈಶ್ವರ ಖಂಡ್ರೆ ಅವರ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಿದರು. ರಾಜ್ಯದಲ್ಲಿ ಮಾದಕ ವ್ಯಸನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಡ್ರಗ್ಸ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತಂದು ಬಿಗಿಯಾದ ಕಾನೂನು ತರಲು ಸರ್ಕಾರ ಮುಂದಾಗಿದೆ ಎಂದರು.