ಬೆಂಗಳೂರು, ಡಿ.09 (DaijiworldNews/PY): "ಡಿ.8ರಂದು ನಡೆದ ಭಾರತ್ ಬಂದ್ ಸಂಪೂರ್ಣವಾಗಿ ವಿಫಲವಾಗಿದೆ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಮ್ಮ ಸರ್ಕಾರವು ರೈತರ ಪರವಾಗಿದೆ ಎನ್ನುವುದು ಸಾಬೀತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ಕೂಡಾ ರೈತರ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ, ನಡೆದುಕೊಂಡಿಲ್ಲ. ಎಪಿಎಂಸಿ ಕಾಯ್ದೆಗಳನ್ನು ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಸಲುವಾಗಿ ಜಾರಿಗೆ ತರಲಾಗಿದೆ" ಎಂದು ತಿಳಿಸಿದ್ದಾರೆ.
"ನಾವು ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶವನ್ನು ಹೊಂದಿದ್ದೇವೆ. ಆದರೆ, ರೈತರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ" ಎಂದಿದ್ದಾರೆ.