ಬೆಂಗಳೂರು , ಡಿ.09 (DaijiworldNews/PY): ಕೊಡಗು ಜಿಲ್ಲೆಯ ಮಾಜಿ ಸಚಿವ ಬಿ.ಎ.ಜೀವಿಜಯ ಹಾಗೂ ಅವರ ಬೆಂಬಲಿಗರು ಜೆಡಿಎಸ್ ಪಕ್ಷ ತೊರೆದು ಡಿ.9ರ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮಾಜಿ ಸಚಿವ ಬಿ.ಎ.ಜೀವಿಜಯ ಹಾಗೂ ಅವರ ಬೆಂಬಲಿಗರಿಗೆ ಕಾಂಗ್ರೆಸ್ ಪಕ್ಷದ ಬಾವುಟ ನೀಡುವ ಮುಖೇನ ಪಕ್ಷಕ್ಕೆ ಬರಮಾಡಿಕೊಂಡರು.
ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅವರು, "ಜೆಡಿಎಸ್ ಪಕ್ಷದ ನಿಲುವು ನೋಡಿ ನನಗೆ ನಿದ್ರೆ ಬರಲಿಲ್ಲ. ಜಾತ್ಯತೀತ ಎಂದು ಹೇಳುವ ಪಕ್ಷದ ನಡೆ ನೋಡಿ ನನಗೆ ಬೇಸರವಾಗಿದೆ" ಎಂದು ಹೇಳಿದರು.
ಮಡಿಕೇರಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜಾರಾಮ್ ಅವರು ಬೇಸರ ವ್ಯಕ್ತಪಡಿಸಿದ್ದು, "ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನನ್ನ ಹೆಸರು ಹೇಳಿಲ್ಲ" ಎಂದಿದ್ದಾರೆ.
"ಅವರು ನಿಮ್ಮ ಹೆಸರು ಹೇಳಿದ್ದಾರೆ" ಎಂದು ಉಳಿದ ನಾಯಕರು ಸಮಾಧಾನಪಡಿಸಿದರು.