ಬೆಂಗಳೂರು, ಡಿ.09 (DaijiworldNews/PY): "ಜೆಡಿಎಸ್ ಬೆಂಬಲದೊಂದಿಗೆ ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಯಿತು. ದುಃಖದ ದಿನ" ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಅಹಿಂಸಾ ಚೇತನ್ ವಿಷಾದ ವ್ಯಕ್ತಪಡಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಬಿಜೆಪಿಯ ಕರ್ನಾಟಕ ಭೂ ಸುಧಾರಣ ಕಾಯ್ದೆ ತಿದ್ದುಪಡಿ-2020 ಇದು 450 ಎಕರೆ ಕೃಷಿ ಭೂಮಿಯನ್ನು ಖರೀದಿಸಲು ಯಾರಿಗಾದರೂ ಅವಕಾಶ ನೀಡುತ್ತದೆ. ಜೆಡಿಎಸ್ ಬೆಂಬಲದೊಂದಿಗೆ ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಯಿತು. ದುಃಖದ ದಿನ" ಎಂದಿದ್ದಾರೆ.
"ರೈತರ ಹಕ್ಕುಗಳಿಗಾಗಿ ಹೋರಾಡುವುದಾಗಿ ಹೇಳಿಕೊಂಡು ತಮ್ಮ ರಾಜಕೀಯ ವೃತ್ತಿಯನ್ನು ಕಟ್ಟಿಕೊಂಡ ಬಿ.ಎಸ್.ಯಡಿಯೂರಪ್ಪ ಹಾಗೂ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಅವರು ಮೋಸದವರು ಎಂದು ಸಾಬೀತುಪಡಿಸುತ್ತಾರೆ" ಎಂದು ಹೇಳಿದ್ದಾರೆ.
ರೈತರ ಹೋರಾಟಕ್ಕೆ ಬೆಂಬಲ ನೀಡದ ಚಿತ್ರ ನಟರ ವಿರುದ್ದ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, "ದೇಶಾದ್ಯಂತ ರೈತರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಚುನಾವಣಾ ಪ್ರಚಾರದ ಬ್ಯಾಂಡ್ವ್ಯಾಗನ್ಗಳ ಮೇಲೆ ವೇಗವಾಗಿ ನೆಗೆಯುವ ಕನ್ನಡ ಚಲನಚಿತ್ರ ನಟರು ರೈತರಿಗೆ ಬೆಂಬಲವಾಗಿ ಒಂದು ಮಾತನ್ನೂ ಹೇಳಿಲ್ಲ. ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ?. ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ನಾವು ನಟರು ಮಾತ್ರ ಆಸಕ್ತಿ ಹೊಂದಿದ್ದೇವೆಯೇ?" ಎಂದು ಕೇಳಿದ್ದರು.
ರೈತರ ಹೋರಾಟಕ್ಕೆ ನಟ ಶಿವರಾಜ್ ಕುಮಾರ್ ಅವರು ಕೂಡಾ ಬೆಂಬಲ ಸೂಚಿಸಿದ್ದು, ''ರೈತ ದೇಶದ ಬೆನ್ನೆಲುಬು , ರೈತ ಇದ್ರೇನೆ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ'' ಎಂದು ಹೇಳಿದ್ದರು.