ನವದೆಹಲಿ, ಡಿ.09 (DaijiworldNews/PY): "ಸರ್ಕಾರ ಪ್ರಜಾಪ್ರಭುತ್ವದಿಂದ ಮುಕ್ತಿ ಪಡೆಯಲು ಇಚ್ಛಿಸುತ್ತಿದೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಸುಧಾರಣೆಯು ಕಳ್ಳತನಕ್ಕೆ ಸಮಾನವಾಗಿದ್ದು, ಈ ಕಾರಣದಿಂದ ಪ್ರಜಾಪ್ರಭುತ್ವದಿಂದ ಅವರು ಮುಕ್ತಿ ಪಡೆಯಲು ಇಚ್ಛಿಸುತ್ತಿದ್ದಾರೆ" ಎಂದಿದ್ದಾರೆ.
ಮಂಗಳವಾರ ನಡೆದ ವರ್ಚುವಲ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಅವರು, "ನಮ್ಮಲ್ಲಿ ಪ್ರಜಾಪ್ರಭುತ್ವ ತುಂಬಾ ಇದೆ. ಈ ನಿಟ್ಟಿನಲ್ಲಿ ಭಾರತದಲ್ಲು ಸುಧಾರಣೆ ತರಲು ಸುಲಭವಿಲ್ಲ. ಕೃಷಿ, ಕಲ್ಲಿದ್ದಲು ಸೇರಿದಂತೆ ಗಣಿಗಾರಿಗೆ ಹಾಗೂ ಇತರೆ ಕ್ಷೇತ್ರಗಳಲ್ಲಿ ಸುಧಾರಣೆ ತರಲು ರಾಜಕೀಯ ಇಚ್ಛಾಶಕ್ತಿಯ ಅಗತ್ಯವೂ ಇದೆ" ಎಂದು ತಿಳಿಸಿದ್ದರು.