ಕೋಲ್ಕತ್ತ, ಡಿ.10 (DaijiworldNews/HR): ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ(76 ) ಅವರಿಗೆ ತೀವ್ರ ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, "ಬುದ್ಧದೇವ್ ಭಟ್ಟಾಚಾರ್ಯ ಬೇಗ ಗುಣಮುಖರಾಗಲಿ ಎಂದು ಹೇಳಿದ್ದಾರೆ".
ಬುದ್ಧದೇವ ಭಟ್ಟಾಚಾರ್ಯ ಅವರನ್ನು ವುಡ್ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು ನೆಗೆಟಿವ್ ವರದಿ ಬಂದಿದೆ. ಆದರೆ ಅವರನ್ನು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನ್ಯಮೋನಿಯಾ ಲಕ್ಷಣಗಳು ಗೋಚರಿಸಿವೆ ಎಂದು ವೈದ್ಯರು ಹೇಳಿದ್ದಾರೆ.