ರಾಂಚಿ, ಡಿ.10 (DaijiworldNews/HR): 35 ವರ್ಷದ ಮಹಿಳೆ ಮೇಲೆ 17 ಮಂದಿ ಪುರುಷರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್ ರಾಜ್ಯದ ಡುಮ್ಕಾ ಜಿಲ್ಲೆಯ ಮುಫಸ್ಸಿಲ್ ಪ್ರದೇಶದಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಮಹಿಳೆ ಮಾರುಕಟ್ಟೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮುಫಸ್ಸಿಲ್ ನ ಡಿಐಜಿ ಸುದರ್ಶನ್ ಮಂಡಲ್ ತಿಳಿಸಿದ್ದಾರೆ.
ಇನ್ನು ಈ ಅತ್ಯಾಚಾರ ಪ್ರಕರಣವನ್ನು ಕೇಂದ್ರ ಮಹಿಳಾ ಆಯೋಗ, ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.
ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಈ ಬಗ್ಗೆ ಜಾರ್ಖಂಡ್ ಡಿಜಿಪಿಗೆ ಪತ್ರ ಬರೆದಿದ್ದು, ಈ ಪ್ರಕರಣ ಕುರಿತು 2 ತಿಂಗಳೊಳಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತೆಗೆದುಕೊಳ್ಳುವ ಕ್ರಮವನ್ನು ವಿಸ್ತ್ರೃತವಾಗಿ ತಿಳಿಸಬೇಕೆಂದು ಕೂಡ ಪತ್ರದಲ್ಲಿ ತಿಳಿಸಿದ್ದಾರೆ.
ಬಿಹಾರ ಉಪ ಮುಖ್ಯಮಂತ್ರಿ ರೇಣು ದೇವಿ ಘಟನೆ ಬಗ್ಗೆ ಪ್ರತಿಕ್ರಿಯಿಸಿ, ಜಾರ್ಖಂಡ್ ಸರ್ಕಾರದ ತಪ್ಪು ಕ್ರಮಗಳಿಂದಾಗಿ ಇಂತಹ ಘಟನೆಗಳು ನಡೆಯುತ್ತಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ ಸಂತ್ರಸ್ತ ಮಹಿಳೆಗೆ ನ್ಯಾಯ ನೀಡಬೇಕೆಂದು ಒತ್ತಾಯಿಸಿದ್ದಾರೆ.