ನವದೆಹಲಿ, ಡಿ.10 (DaijiworldNews/PY): "ನೀಟ್ ಪರೀಕ್ಷೆಯನ್ನು ರದ್ದುಪಡಿಸಲಾಗುತ್ತದೆ ಎನ್ನುವುದು ವದಂತಿ. ನೀಟ್ ಪರೀಕ್ಷೆಯನ್ನು ರದ್ದು ಮಾಡುವಂತಹ ಯಾವುದೇ ಉದ್ದೇಶವಿಲ್ಲ" ಎಂದು ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೊಕ್ರಿಯಾಲ್ ತಿಳಿಸಿದ್ದಾರೆ.
ದೆಹಲಿಯಲ್ಲಿ ತಜ್ಞರೊಂದಿಗೆ ವೆಬಿನಾರ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಕೊರೊನಾ ಸಂಕಷ್ಟದ ಹಿನ್ನೆಲೆ ಮುಂದೂಡಲಾಗಿದ್ದ ಸಿಬಿಎಸ್ನ 10 ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ಮುಂದಿನ ವರ್ಷ 2021ರಲ್ಲಿ ಮಾಡಲಾಗುವುದು. ಈ ವಿಚಾರವಾಗಿ ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗುವುದು ಬೇಡ" ಎಂದು ಹೇಳಿದ್ದಾರೆ.
ಈ ವೇಳೆ ಸಚಿವರು ಜೆಇಇ ಸೇರಿದಂತೆ ನೀಟ್ 2021 ಮುಖ್ಯ ಪರೀಕ್ಷೆ ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.