ನವದೆಹಲಿ, ಡಿ.10 (DaijiworldNews/PY): "ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಇದು ಮಾನವೀಯತೆಯ ವಿರುದ್ಧದ ಅಪರಾಧ. ದೇಶದ ಉತ್ತಮ ಭವಿಷ್ಯಕ್ಕಾಗಿ, ನಾವು ಪ್ರತಿ ವರ್ಗದ ಹಕ್ಕುಗಳನ್ನು ಗೌರವಿಸಬೇಕು" ಎಂದಿದ್ದಾರೆ.
ಇತ್ತೀಚೆಗೆ ಕೂಡಾ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ರಾಹುಲ್, "ಸರ್ಕಾರವು ಪ್ರಜಾಪ್ರಭುತ್ವದಿಂದ ಮುಕ್ತಿ ಪಡೆಯಲು ಇಚ್ಛಿಸುತ್ತಿದೆ" ಎಂದು ಹೇಳಿದ್ದರು.
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 15 ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಡಿ.14ರಂದು ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಈ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ಪ್ರತಿಭಟನೆಯನ್ನುಅಂತ್ಯಗೊಳಿಸುವಂತೆ ರೈತರಿಗೆ ಮನವಿ ಮಾಡಲಿದ್ದಾರೆ.