ಬೆಂಗಳೂರು, ಡಿ.10 (DaijiworldNews/PY): ವಿಧಾನಮಂಡಲದ ಚಳಿಗಾಲ ಅಧಿವೇಶ ಇಂದು ಮುಕ್ತಾಗೊಳ್ಳಲಿದೆ. ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕಾರ ಮಾಡಿದ್ದನ್ನು ಕಾಂಗ್ರೆಸ್ ವಿರೋಧಿಸಿದ ಹಿನ್ನೆಲೆ ಕಲಾಪವನ್ನು ಬಹಿಷ್ಕರಿಸಿದೆ. ಈ ಹಿನ್ನೆಲೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಧಾನಕ್ಕೆ ಮುಂದಾಗಿದ್ದಾರೆ.
ಕಾಂಗ್ರೆಸ್ ಕಲಾಪವನ್ನು ಬಹಿಷ್ಕರಿಸಿದ ಕಾರಣ ಇಂದು ಕಲಾಪವನ್ನು ಹತ್ತು ನಿಮಿಷಗಳ ಕಾಲ ಮುಂಡೂಡಲಾಯಿತು.
ಕಲಾಪವನ್ನು ಮುಂದೂಡುವ ಮೊದಲು ಮಾತನಾಡಿದ ಸಭಾಧ್ಯಕ್ಷ, "ಸದನದ ಕಲಾಪವನ್ನು ಬಹಿಷ್ಕರಿಸುವುದು ಸೂಕ್ತವಲ್ಲ. ಪ್ರತಿಪಕ್ಷದ ನಾಯಕರಲ್ಲಿ ನಾನು ಮನವಿ ಮಾಡುತ್ತೇನೆ. ಸದನದ ಕಲಾಪದಲ್ಲಿ ಅವರು ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ಹತ್ತು ನಿಮಿಷಗಳ ಕಾಲ ಸದನ ಮುಂದೂಡುತ್ತೇನೆ. ಪ್ರತಿಪಕ್ಷದ ನಾಯಕರನ್ನು ಮನವೊಲಿಸುವ ಪ್ರಯತ್ನ ಮಾಡುತ್ತೇನೆ" ಎಂದರು.
ಇದರ ಬೆನ್ನಲ್ಲೇ ಸಂಧಾನಕ್ಕೆ ಬರುವಂತೆ ಸಿದ್ದರಾಮಯ್ಯ ಅವರಿಗೆ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಆಹ್ವಾನ ನೀಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಸಭೆಯ ಬಳಿಕ ಕಲಾಪಕ್ಕೆ ಬರುವುದಾಗಿ ಹೇಳಿದ್ದಾರೆ.