ನವದೆಹಲಿ, ಡಿ.11 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ದೆಹಲಿಯ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ 16ನೇ ದಿನಕ್ಕೆ ಕಾಲಿಟ್ಟಿದೆ.
ಈ ಕುರಿತು ರೈತ ಮುಖಂಡ ಶಿವಕುಮಾರ್ ಕಕ್ಕ ಮಾತನಾಡಿ, "ಪ್ರತಿಭಟನೆಗೆ ತಕ್ಕ ಉತ್ತರ ಸಿಗದಿದಲ್ಲಿ ರೈಲು ತಡೆಯುವ ಮೂಲಕ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದು, ಸಮಸ್ಯೆ ಬಗೆಹರಿಯುವುದು ದೇವರಿಗೆ ಮಾತ್ರ ಗೊತ್ತು" ಎಂದು ಹೇಳಿದ್ದಾರೆ.
ಇನ್ನು"ಭರವಸೆ ಈಡೇರದಿದ್ದಲ್ಲಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಿಸುತ್ತೇವೆ. ಅದರ ಅಂಗವಾಗಿ ರೈಲುಗಳು ರಾಜಧಾನಿ ಪ್ರವೇಶಿಸುವುದಕ್ಕೆ ತಡೆ ಒಡ್ಡಲಾಗುವುದು. ಈ ಪ್ರತಿಭಟನೆ ಹರಿಯಾಣ ಹಾಗೂ ಪಂಜಾಬ್ಗೆ ಮಾತ್ರ ಸೀಮಿತವಾಗಿರುವುದಿಲ್ಲ. ದೇಶದಾದ್ಯಂತ ರೈಲು ತಡೆ ಚಳುವಳಿ ಹಮ್ಮಿಕೊಳ್ಳುತ್ತೇವೆ" ಎಂದು ರೈತ ನಾಯಕ ಬೂಟಾ ಸಿಂಗ್ ಹೇಳಿದ್ದಾರೆ.