ಬೆಂಗಳೂರು, ಡಿ.11 (DaijiworldNews/PY): "ನಾವು ಕೊರೊನಾ ಸಂಕಷ್ಟದ ಕಾಲದಲ್ಲೂ ಕೂಡಾ ನೌಕರರಿಗೆ ಸಂಬಳ ನೀಡಿದ್ದೇವೆ. ಈ ವಿಚಾರವನ್ನು ನೌಕರರು ಅರ್ಥ ಮಾಡಿಕೊಳ್ಳಬೇಕು. ಪ್ರತಿಭಟನೆ ಕೈಬಿಟ್ಟು, ಕರ್ತವ್ಯಕ್ಕೆ ಹಾಜರಾಗಿ" ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ನೌಕರರಲ್ಲಿ ಮನವಿ ಮಾಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸರ್ಕಾರ ನಿಮ್ಮನ್ನು ನಿರ್ಗತಿರನ್ನಾಗಿ ಮಾಡಲು ಬಿಡುವುದಿಲ್ಲ. ನಿಮ್ಮ ಬೇಡಿಕೆಗಳಿಗೆ ಸ್ಪಂದಿಸುವ ಕಾರ್ಯವನ್ನು ನಾವು ಮಾಡುತ್ತೇವೆ. ಕೊರೊನಾ ವೇಳೆಯಲ್ಲಿ ಪ್ರತಿಭಟನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಬೇಡಿ. ಕೂಡಲೇ ಪ್ರತಿಭಟನೆಯನ್ನು ಕೈಬಿಡಿ" ಎಂದು ಹೇಳಿದರು.
"ಮಧ್ಯಾಹ್ನ ವೇಳೆಗೆ ಯೂನಿಯನ್ ಸಭೆ ಕರೆಯಲಾಗಿದ್ದು, ಈ ಸಂದರ್ಭ ತಕ್ಷಣದ ಪರಿಹಾರದ ವಿಚಾರವಾಗಿ ಚರ್ಚೆ ನಡೆಸುತ್ತೇವೆ" ಎಂದು ತಿಳಿಸಿದ್ದಾರೆ.