ನವದೆಹಲಿ, ಡಿ.11 (DaijiworldNews/HR): ಸಿಂಘು ಗಡಿ ಪ್ರದೇಶದಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಸೋಂಕು ವ್ಯಾಪಕವಾಗಿ ಹರಡಿರಬಹುದೇ ಎಂಬುದು ಆತಂಕ ಸೃಷ್ಟಿಯಾಗಿದೆ.
ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಅವರನ್ನು ಹೋಮ್ ಕ್ವಾರಂಟೈನ್ಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿ ಹಾಗೂ ಹರಿಯಾಣ ಗಡಿ ಪ್ರದೇಶಗಳಲ್ಲಿ ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದು, ಅಲ್ಲಿ ಈ ಅಧಿಕಾರಿ ಕರ್ತವ್ಯದಲ್ಲಿ ನಿರತರಾಗಿದ್ದರು.