ಬೆಂಗಳೂರು, ಡಿ.11 (DaijiworldNews/HR): ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಅವರಿಗೆ ಹೈಕೋರ್ಟ್ ಶುಕ್ರವಾರ ಷರತ್ತಬದ್ಧ ಜಾಮೀನು ಮಂಜೂರು ಮಾಡಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ನಟಿ ಸಂಜನಾ ಗಲ್ರಾನಿಗೆ ಕೊನೆಗೂ ಶುಕ್ರವಾರ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದ್ದು 3 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಲು ತಿಳಿಸಿದೆ.
ಗುರುವಾರವೂ ಸಂಜನಾ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ವಿಚಾರಣೆ ಶುಕ್ರವಾರಕ್ಕೆ ಮುಂದೂಡಲಾಗಿತ್ತು. ಶುಕ್ರವಾರ ವಿಚಾರಣೆ ನಡೆಸಿದ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ.