ನವದೆಹಲಿ,ಡಿ.11 (DaijiworldNews/HR): ಕೇಂದ್ರ ಸರ್ಕಾರವು ಆಯುರ್ವೇದ ಸ್ನಾತಕೋತ್ತರ ವೈದ್ಯರಿಗೆ ಶಸ್ತ್ರಚಿಕಿತ್ಸಾ ವಿಧಾನಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಿದ್ದು, ಅದನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಪ್ರತಿಭಟನೆಗೆ ಏಮ್ಸ್ ವೈದ್ಯರು ಬೆಂಬಲ ಸೂಚಿಸಿದ್ದಾರೆ.
ಈ ಕಪ್ಪು ಪಟ್ತಿ ಧರಿಸಿ ನಡೆಸುತ್ತಿರುವ ಪ್ರತಿಭಟನೆಗೆ ಸರ್ಕಾರಿ ಆಸ್ಪತ್ರೆಗಳಾದ ಎಲ್ಎನ್ಜೆಪಿ ಆಸ್ಪತ್ರೆ, ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಡಿಡಿಯು, ಜಿಟಿಬಿ, ಬಿಎಸ್ಎ ಆಸ್ಪತ್ರೆ, ಸಂಜಯ್ ಗಾಂಧಿ ಮೆಮೊರಿಯಲ್ ಆಸ್ಪತ್ರೆ , ಹಿಂದೂ ರಾವ್ ಆಸ್ಪತ್ರೆಯ ವೈದ್ಯರು ಕೂಡ ಬೆಂಬಲ ಸೂಚಿಸಿದ್ದಾರೆ.
ಇನ್ನು ಸರ್ಕಾರದ ನಿರ್ಧಾರದಿಂದ ಸಾರ್ವಜನಿಕರ ಸುರಕ್ಷತೆಯ ಮೇಲೆ ಪರಿಣಾಮ ಬೀರಲಿದ್ದು, ಈ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ವೈದ್ಯರು ಕೋರಿದ್ದಾರೆ.