ಬೆಂಗಳೂರು, ಡಿ.12 (DaijiworldNews/PY): ವಿಧಾನ ಪರಿಷತ್ ಕಲಾಪವನ್ನು ಡಿ.15ರವರೆಗೆ ಮುಂದುವರೆಸುವಂತೆ ಕೋರಿ ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಬಿಜೆಪಿ ಸದಸ್ಯರು ಮನವಿ ಸಲ್ಲಿಸಿದ್ದಾರೆ.
ಡಿ.15ರವರೆಗೆ ಚಳಿಗಾಲದ ಅಧಿವೇಶನ ನಡೆಯಬೇಕಿತ್ತು. ಆದರೆ, ಚುನಾವಣೆ ನೀತಿ ಸಂಹಿತೆಯ ಹಿನ್ನೆಲೆ ಡಿ.10ರಂದು ವಿಧಾನಸಭೆ ಕಲಾಪವನ್ನು ಮೊಟಕುಗೊಳಿಸಲಾಗಿತ್ತು. ಈ ನಡುವೆ ನಿನ್ನೆ ಪರಿಷತ್ ಕಲಾಪವನ್ನು ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.
ಈ ಹಿನ್ನೆಲೆ ಬಿಜೆಪಿ ಸದಸ್ಯರು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಪತ್ರ ಬರೆದಿದ್ದು, ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರ ವಿರುದ್ದ ನೀಡಲಾದ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆಸಬೇಕಿದೆ. ಅಲ್ಲದೇ, ಗೋಹತ್ಯೆ ನಿಷೇಧ ಕಾಯ್ದೆ ಮಂಡನೆಯಾಗಬೇಕಿದೆ. ಈ ನಿಟ್ಟಿನಲ್ಲಿ ಕಲಾಪವನ್ನು ಡಿ.15ರವರೆಗೆ ನಡೆಸಲು ಸಭಾಪತಿ ಸೂಚನೆ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.