ಬೆಂಗಳೂರು,ಡಿ.12 (DaijiworldNews/HR): ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಅಂಧಿತ ಆರೋಪಿಯನ್ನು ಕವಿರಾಜ್ ಎಂದು ಗುರುತಿಸಲಾಗಿದೆ.
ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದು, ಇಂದು ಬೆಳಿಗ್ಗೆ ಕವಿರಾಜ್ನನ್ನು ತಮಿಳುನಾಡಿನಲ್ಲಿ ಬಂಧಿಸಿರುವುದಾಗಿ ಕೇಂದ್ರ ವಲಯದ ಐಜಿಪಿ ಸೀಮಂತ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇನ್ನು ನವಂಬರ್ 25ರಂದು ಪ್ರಕಾಶ್ ಅವರ ಕಾರನ್ನು ಚಾಲಕ ಸುನೀಲ್ ಚಾಲನೆ ಮಾಡುತ್ತಿದ್ದು, ಫಾರಂಹೌಸ್'ನಿಂದ ಒಂದು ಕಿ.ಮೀ ದೂರದಲ್ಲಿ ಎರಡು ಕಾರಿನಲ್ಲಿ ಬಂದ ದುಷ್ಕರ್ಮಿಗಳು ನಮ್ಮ ಕಣ್ಣಿಗೆ ಬಟ್ಟೆಕಟ್ಟಿ ಕಾರಿನಲ್ಲಿ ಅಪಹರಣ ಮಾಡಿದ್ದರು. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೂ.30 ಕೋಟಿ ಬೇಡಿಕೆ ಇಟ್ಟಿದ್ದರು. ಹಣ ತರಿಸಿಕೊಡಲು ನಿರಾಕರಿಸಿದಾಗ ಕೈಕಾಲುಗಳನ್ನು ಕಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು ಎಂದು ವರ್ತೂರು ಪ್ರಕಾಶ್ ಪೊಲೀಸರಿಗೆ ದೂರು ನೀಡಿದ್ದರು.