ಬೆಳಗಾವಿ, ಡಿ.12 (DaijiworldNews/MB) : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ ಚಾಲಕರೋರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್ (58) ಎಂದು ಹೇಳಲಾಗಿದೆ.
ದತ್ತಾ ಮಂಡೋಳ್ಕರ್ ಅವರು ಬೆಳಗಾವಿಯ ಎರಡನೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಶುಕ್ರವಾರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ತಮಗೆ ಎದೆನೋವು ಕಾಣಿಸಿಕೊಂಡ ಕಾರಣ ತಮ್ಮ ನಿವಾಸಕ್ಕೆ ವಾಪಸ್ ತೆರಳಿದ್ದರು ಎನ್ನಲಾಗಿದೆ.
ಅವರು ತಡರಾತ್ರಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.