ಹೈದರಾಬಾದ್, ಡಿ.12 (DaijiworldNews/HR): ಹೈದರಾಬಾದ್ನ ಹೊರವಲಯದಲ್ಲಿರುವ ಬೊಲ್ಲಾರಮ್ ಕೈಗಾರಿಕಾ ಪ್ರದೇಶದ ವಿಂದ್ಯಾ ಆರ್ಗಾನಿಕ್ ಪ್ರೈವೇಟ್ ಲಿಮಿಟೆಡ್ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿ ಎಂಟು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಕಾರ್ಖಾನೆಯಲ್ಲಿ ದ್ರಾವಕವೊಂದನ್ನು ಇಟ್ಟಿದ್ದು, ಅದಕ್ಕೆ ಬೆಂಕಿ ತಗುಲಿ ಇಡೀ ಕಾರ್ಖಾನೆಗೆ ಹತ್ತಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.
ಕಾರ್ಖಾನೆಯಿಂದ ಹೆಚ್ಚಿನ ಮಟ್ಟದಲ್ಲಿ ಹೊಗೆಯಾಗುಡುತ್ತಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ ಎಂದು ತಿಳಿದು ಬಂದಿದೆ.
ಇನ್ನು ಸ್ಫೋಟದಲ್ಲಿ ಎಂಟು ಉದ್ಯೋಗಿಗಳಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.