ಬೆಂಗಳೂರು, ಡಿ.12 (DaijiworldNews/MB) : ''ನಾವು ನಿಮ್ಮೊಂದಿಗೆ ಇದ್ದೇವೆ'' ಎಂದು ಮುಷ್ಕರ ನಿರತ ಸಾರಿಗೆ ನೌಕರರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲ ಸೂಚಿಸಿದ್ದಾರೆ.
ಹಲವು ಬೇಡಿಕೆಗಳನ್ನು ಈಡೇರಿಡುವಂತೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಹಾಗೂ ನಗರ ಸಾರಿಗೆ ಸಂಸ್ಥೆಗಳ ನೌಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಶನಿವಾರ ಮಧ್ಯಾಹ್ನ ಬನಶಂಕರಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ರಸ್ತೆ ಸಾರಿಗೆ ಹಾಗೂ ನಗರ ಸಾರಿಗೆ ಸಂಸ್ಥೆಗಳ ನೌಕರರನ್ನು ಭೇಟಿಯಾದ ಶಿವಕುಮಾರ್, ನೌಕರರ ಅಹವಾಲು ಆಲಿಸಿದರು. ''ನಾವು ನಿಮ್ಮೊಂದಿಗೆ ಇದ್ದೇವೆ'' ಎಂದು ಭರವಸೆ ನೀಡಿದರು.
ಶಿವಕುಮಾರ್ರೊಂದಿಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಪುಟ್ಟಸ್ವಾಮಿ ಗೌಡರು, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್, ದೊಡ್ಡ ಆಲಹಳ್ಳಿ ಕಾಂಗ್ರೆಸ್ ಮುಖಂಡ ಬಾಬು ಇದ್ದರು.