ನವದೆಹಲಿ, ಡಿ.12 (DaijiworldNews/MB) : ''ಕುಟುಂಬ ಯೋಜನೆಯನ್ನು ದೇಶದ ಜನರ ಮೇಲೆ ಒತ್ತಾಯಪೂರ್ವಕವಾಗಿ ಹೇರಲು ಸಾಧ್ಯವಿಲ್ಲ'' ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ತಿಳಿಸಿದೆ.
ದೇಶದಲ್ಲಿ ಅಧಿಕವಾಗುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಎರಡೇ ಮಕ್ಕಳು ಸೇರಿದಂತೆ ಕೆಲವು ಕ್ರಮಗಳ ಜಾರಿಗೆ ಕೋರಿ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಮುಖಂಡ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸುಪ್ರೀಂಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು.
ಈ ಬಗ್ಗೆ ಆರೋಗ್ಯ ಸಚಿವಾಲಯವು ಸುಪ್ರಿಂಕೋರ್ಟ್ಗೆ ಸಲ್ಲಿಸಿರುವ ಅಫಿಡವಿಟ್ನಲ್ಲಿ, ಇಷ್ಟೇ ಮಕ್ಕಳನ್ನು ಹೊಂದಬೇಕು ಎಂದು ಹೇಳುವುದು ಬಲವಂತದ ಪ್ರತಿ ಉತ್ಪಾದಕವಾಗಿದೆ. ಇದು ಸ್ವಯಂಪ್ರೇರಿತವಾದ ಕ್ರಮ. ಸರ್ಕಾರ ಕುಟುಂಬ ಯೋಜನೆ ಒತ್ತಾಯಪೂರ್ವಕವಾಗಿ ಹೇರಲು ಸಾಧ್ಯವಿಲ್ಲ ಎಂದು ಹೇಳಿದೆ.
ಇನ್ನು 'ಸಾರ್ವಜನಿಕ ಆರೋಗ್ಯ' ರಾಜ್ಯಗಳ ವಿಷಯವಾಗಿದೆ. ರಾಜ್ಯ ಸರ್ಕಾರಗಳು ಆರೋಗ್ಯ ಕ್ಷೇತ್ರದ ಸುಧಾರಣೆಯ ಪ್ರಕ್ರಿಯೆಯನ್ನು ನಡೆಸಬೇಕು ಎಂದು ಕೂಡಾ ಸಚಿವಾಲಯ ಹೇಳಿದೆ.